ಮಹಾರಾಷ್ಟ್ರ : ದೇಶದಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹಚ್ಚುತ್ತಲೇ ಇವೆ. ಇದೀಗ ಪುಣೆಯಲ್ಲಿ ಯುವತಿಯ ಮೇಲೆ ಮೂವರು ಸಾಮೂಹಿಕ ಅತ್ಯಾಚಾರ ಎಸಗಿ, ಆಕೆಯ ಸ್ನೇಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಪುಣೆಯ ಹೊರ ವಲಯದಲ್ಲಿ ನಡೆದಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಗುರುವಾರ ರಾತ್ರಿ ಸುಮಾರು 11 ಗಂಟೆ ವೇಳೆಗೆ ಬೋಪದೇವ ಘರ್ ಪ್ರದೇಶದಲ್ಲಿ ಮೂವರು ಸೇರಿ ಅತ್ಯಾಚಾರ ಎಸಗಿದ್ದಾರೆ.ಆಕೆ ತನ್ನ ಸ್ನೇಹಿತನ ಜತೆ ಬೋಪ್ದೇವ್ ಗಢ ಪ್ರದೇಶಕ್ಕೆ ಹೋಗಿದ್ದರು, ಅಲ್ಲಿ ಮೂವರು ಅಪರಿಚಿತರು ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಸಾಮೂಹಿಕ ಅತ್ಯಾಚಾರದ ಹಿಂದಿನ ಆರೋಪಿಗಳ ಪತ್ತೆಗೆ 10 ಪೊಲೀಸ್ ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರತ್ಯೇಕ ಸ್ಥಳದಲ್ಲಿ ಘಟನೆ ನಡೆದಿದ್ದು, ಮೂವರು ಯುವತಿಯ ಸ್ನೇಹಿತನ ಮೇಲೂ ಹಲ್ಲೆ ನಡೆಸಿದ್ದಾರೆ ಎಂದು ಕೊಂಧ್ವಾ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಖೊಂಡ್ವಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.