ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಹಾಡು ಹಗಲೇ 17 ವರ್ಷದ ಬಾಲಕಿಯ ಮೇಲೆ ದುರುಳನೊಬ್ಬ ಅತ್ಯಾಚಾರ ಎಸಗಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ.
ಸದ್ಯ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿ ರವಿಕುಮಾರ್ (39) ನನ್ನು ಬಂಧಿಸಲಾಗಿದೆ. ಸಂತ್ರಸ್ತ ಬಾಲಕಿಯ ತಂದೆ ಆರೋಪಿಯ ಬಳಿ 70,000 ಹಣ ಪಡೆದಿದ್ದ ಎನ್ನಲಾಗಿದೆ. ಈ ಹಿಂದೆ 30 ಸಾವಿರ ರೂಪಾಯಿಯನ್ನು ಬಾಲಕಿಯ ತಂದೆ ಸಾಲವನ್ನು ತೀರಿಸಿದ್ದ. ಇನ್ನುಳಿದ 40,000 ಜೊತೆಗೆ ಬಡ್ಡಿ ಹಣ ನೀಡದಿದ್ದಕ್ಕೆ ಪೀಡಿಸುತ್ತಿದ್ದ ಎನ್ನಲಾಗಿದೆ.
ಬಾಲಕಿಯ ತಂದೆ ಹಣ ವಾಪಸ್ ನೀಡಲು ವಿಳಂಬವಾಗಿದ್ದಕ್ಕೆ ಆರೋಪಿ ರವಿಕುಮಾರ್ ಪಿಡಿಸುತ್ತಿದ್ದ.ಈ ಹಿಂದೆ ಬಲವಂತವಾಗಿ ಬಾಲಕಿಗೆ ರವಿಕುಮಾರ್ ಕಿಸ್ ಕೊಟ್ಟಿದ್ದ.ಕಿಸ್ ಕೊಟ್ಟಿರುವುದನ್ನು ರವಿಕುಮಾರ್ ಫೋಟೋ ತೆಗೆದುಕೊಂಡಿದ್ದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ ಕೂಡ ಹಾಕಿದ್ದ.
ಯಾರು ಇಲ್ಲದ ವೇಳೆ ಮನೆಗೆ ನುಗ್ಗಿ ಬಾಲಕಿಯ ಮೇಲೆ ಅತ್ಯಾಚಾರ ಎಸೆಗಿದ್ದಾನೆ. ಬಾಲಕಿ ನೀಡಿದ ದೂರಿನ ಮೇರೆಗೆ ಆರೋಪಿ ರವಿ ಕುಮಾರನನ್ನು ಬಂಧಿಸಲಾಗಿದೆ.ಸದ್ಯ ಮಾದನಾಯಕನಹಳ್ಳಿ ಠಾಣೆ ಪೋಲೀಸರು ರವಿಕುಮಾರ್ ನನ್ನು ಜೈಲಿಗಟ್ಟಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.