ರಾಯಚೂರು : ರಾಯಚೂರು ಜಿಲ್ಲೆಯಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಕಾಮುಕನೊಬ್ಬ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ರಾಯಚೂರು ಜಿಲ್ಲೆಯ ಲಿಂಗಸುಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ೧೭ ವರ್ಷದ ಬಾಲಕಿ ಬಹಿರ್ದೆಸೆಗೆ ಹೋದಾಗ ಕಾಮುಕ ಬಸವರಾಜ್ ಎಂಬಾತ ಬಾಲಕಿಯನ್ನು ಪೋದೆಯೊಳಗೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಅತ್ಯಾಚಾರದ ಬಳಿಕ ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಲು ಮುಂದಾಗಿದ್ದಾನೆ. ಸದ್ಯ ಬಾಲಕಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾಳೆ. ಆರೋಪಿ ಬಸವರಾಜ ನನ್ನು ಪೊಲೀಸರು ಬಂಧಿಸಿದ್ದಾರೆ. ಲಿಂಗಸೂಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.