ವಿಜಯಪುರ : ಇತ್ತೀಚಿಗೆ ವಿಜಯಪುರದಲ್ಲಿ ಸರಣಿ ಭೂಕಂಪನ ನಡೆಯುತ್ತಿದ್ದು, ನಿನ್ನೆ ರಾತ್ರಿ 11:00 ಸುಮಾರಿಗೆ ಒಂದು ಸಲ ಮತ್ತು ಇಂದು ಬೆಳಿಗ್ಗೆ 9 ಗಂಟೆಯ ಹಾಗೆ ಭೂಮಿ ಕಂಪಿಸಿದ ಅನುಭವ ಆಗಿದ್ದು ಜನರು ಬೆಚ್ಚಿಬಿದ್ದಿದ್ದಾರೆ.
ಹೌದು ಜಿಲ್ಲೆಯಲ್ಲಿ ಸರಣಿ ಭೂಕಂಪನ ಸಂಭವಿಸಿದೆ. ಕಳೆದ 2 ತಿಂಗಳ ಅವಧಿಯಲ್ಲಿ 11 ಬಾರಿ ಭೂಮಿ ಕಂಪಿಸಿದ್ದು, ಇದರಿಂದ ಜನರು ಅಕ್ಷರಶಃ ನಲುಗಿ ಹೋಗಿದ್ದಾರೆ. ಮಂಗಳವಾರ ರಾತ್ರಿ 11:41ರ ಸುಮಾರಿಗೆ ಭೂಕಂಪನ ಸಂಭವಿಸಿದ್ದು, ಅದಾದ ಬಳಿಕ ಇಂದು ಬೆಳಿಗ್ಗೆ 5:30ರ ಸುಮಾರಿಗೆ ಭೂಮಿ ಕಂಪಿಸಿದೆ. ಸಿಸಿಟಿವಿ ದೃಶ್ಯದಲ್ಲಿಯೂ ಭೂಕಂಪನದ ತೀವ್ರತೆ ದಾಖಲಾಗಿದೆ.








