ಮಂಗಳೂರು : ರಾಜ್ಯದಲ್ಲಿ ಇಂದು ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ಮೂವರು ಪಾದಚಾರಿಗಳ ಮೇಲೆ ಕಾರು ಹರಿದು ಓರ್ವ ಸಾವನ್ನಪ್ಪಿರುವ ಘಟನೆ ಮಂಗಳೂರು ಹೊರವಲಯದ ಕೊಳಾಯಿ ಬಳಿ ಈ ಒಂದು ಭೀಕರವಾದಂತಹ ಅಪಘಾತ ಸಂಭವಿಸಿದೆ. ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ದೀಪುಗೌಡ (50) ಎಂದು ತಿಳಿದು ಬಂದಿದೆ.
ಇನ್ನು ಅಪಘಾತದಲ್ಲಿ ಕೊಪ್ಪಳ ಜಿಲ್ಲೆಯ ಕಾರಟಗಿ ಮೂಲದ ಪ್ರದೀಪ್ ಕೊಲ್ಕರ್ ಹಾಗೂ ಮಂಗಳೂರಿನ ಕೋಡಿಕೆರೆ ನಿವಾಸಿ, ನಾಗರಾಜ್ ಗೆ ಗಂಭೀರವಾದ ಗಾಯಗಳಾಗಿವೆ. ಕುಳಾಯಿ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ರಸ್ತೆ ದಾಟುತ್ತಿದ್ದಾಗ KA 19 AA 0746 ಸಂಖ್ಯೆಯ ಕಾರು ಡಿಕ್ಕಿ ಹೊಡೆದಿದೆ. ಗಾಯಾಳುಗಳಿಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಭೀಕರ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಅಪಘಾತದ ಕುರಿತು ಪ್ರಕರಣ ದಾಖಲಾಗಿದೆ.