ಮಂಡ್ಯ : ರಿಯಲ್ ಎಸ್ಟೇಟ್ ಹಾಗೂ ಚೀಟಿ ವ್ಯವ್ಯಹಾರ ಸಂಬಂಧ ವಂಚನೆ ನಡೆಸಲಾಗಿದೆ ಎಂದು ಆರೋಪಿಸಿ ಐಶ್ವರ್ಯಗೌಡ ಸೇರಿದಂತೆ ನಾಲ್ವರ ವಿರುದ್ಧ ಮಂಡ್ಯ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
1 ಲಕ್ಷ ರೂ.ಗೆ 10 ಪರ್ಸೆಂಟ್ ಬಡ್ಡಿ ನೀಡುವುದಾಗಿ ಹೇಳಿ 33 ಲಕ್ಷ ರೂ. ಹಣ ಹಾಗೂ 366 ಗ್ರಾಂ ಚಿನ್ನದ ಒಡವೆ ಪಡೆದು ವಂಚಿಸಿದ್ದಾರೆ ಎಂದು ಆರೋಪಿಸಿ ಚಾಮುಂಡೇಶ್ವರಿ ನಗರ ನಿವಾಸಿ ಸೌಭಾಗ್ಯ ಎಂಬುವರು ಮಂಡ್ಯ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಐಶ್ವರ್ಯಗೌಡ, ಪತಿ ಹರೀಶ್, ಸಹೋದರ ಮಂಜುನಾಥ್ ಹಾಗೂ ಯಶವಂತ್ ಎಂಬುವರ ವಿರುದ್ಧ ಸೌಭಾಗ್ಯ ದೂರು ನೀಡಿದ್ದಾರೆ. ಈಗಾಗಲೇ ಮಂಡ್ಯ ಪೂರ್ವ ಠಾಣೆಯಲ್ಲಿ ಐಶ್ವರ್ಯಗೌಡ ವಿರುದ್ಧ ಒಂದು ಪ್ರಕರಣ ದಾಖಲಾಗಿದೆ.