ಬೆಂಗಳೂರು : ಬೆಂಗಳೂರಿನಲ್ಲಿ ತಡರಾತ್ರಿ 1 ಗಂಟೆ ಸುಮಾರಿಗೆ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಆಟೋ ಮೊಬೈಲ್ ಅಂಗಡಿಯೊಂದು ಹೊತ್ತಿ ಉರಿದಿದೆ.
ಬೆಂಗಳೂರಿನ ಜೆಸಿ ರಸ್ತೆಯಲ್ಲಿರುವ ಆಟೋ ಮೊಬೈಲ್ ಅಂಗಡಿ ಹೊತ್ತಿ ಉರಿದಿದೆ. ಅಗ್ನಿ ಶಾಮಕ ಸಿಬ್ಬಂದಿ ಸರಿಯಾದ ಸಮಯಕ್ಕೆ ಆಗಮಿಸಿ ಭಾರೀ ಅನಾಹುತ ತಪ್ಪಿಸಿದ್ದಾರೆ. ಈ ಮೂಲಕ ಸುತ್ತಮುತ್ತಲಿನ ಅಂಗಡಿಗಳು ಬೆಂಕಿಯಿಂದ ಬಚಾವ್ ಆಗಿದ್ದಾವೆ.
ಆಟೋ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡದಿಂದ ಬರೋಬ್ಬರಿ 4 ಕೋಟಿ ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ.