ಬೆಂಗಳೂರು : ಬೆಂಗಳೂರಿನಲ್ಲಿ ತಡರಾತ್ರಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಆಯಿಲ್ ಸಂಗ್ರಹದ ಗೋಡೌನ್ ಹೊತ್ತಿ ಉರಿದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಅಡಕಮಾರನಹಳ್ಳಿ ಬಳಿ ಈ ಘಟನೆ ನಡೆದಿದ್ದು, ಆಯಿಲ್ ಸಂಗ್ರಹದ ಗೋಡೌನ್ ಗೆ ಬೆಂಕಿ ಬಿದ್ದ ಹಿನ್ನೆಲೆಯಲ್ಲಿ 8 ಅಗ್ನಿ ಶಾಮಕದಳದ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಯುತ್ತಿದೆ.
30 ಕೋಟಿ ರೂ. ಮೌಲ್ಯದ ಆಯಿಲ್ ಗೋಡೌನ್ ಬೆಂಕಿಗೆ ಆಹುತಿಯಾಗಿದ್ದು, 20 ಕ್ಕೂ ಹೆಚ್ಚು ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.