ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ದುರಂತ ಸಂಭವಿಸಿದ್ದು, ಗ್ಯಾಸ್ ಲೀಕ್ ಆಗಿ ಅಗ್ನಿ ಅವಘಡ ಸಂಭವಿಸಿ 7 ಜನ ಕಾರ್ಮಿಕರಿಗೆ ಗಂಭೀರವಾಗಿ ಗಾಯಗಳಾಗಿವೆ . ಕಾಡುಮನೆ ಸರ್ಕಲ್ ಬಳಿ ಇರುವ ಬಿಡದೆ ಕೈಗಾರಿಕಾ ಪ್ರದೇಶದಲ್ಲಿ ಈ ಒಂದು ಅಗ್ನಿ ದುರಂತ ಸಂಭವಿಸಿದೆ.
ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಕಾಡುಮನೆ ವೃತ್ತದ ಬಳಿ ಒಂದೇ ಶೆಡ್ ನಲ್ಲಿ 7 ಜನ ಕಟ್ಟಡ ಕಾರ್ಮಿಕರ ವಾಸವಾಗಿದ್ದರು. ಗ್ಯಾಸ್ ಸೋರಿಕೆಯಾಗಿ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಘಟನೆಯಲ್ಲಿ 7 ಕಟ್ಟಡ ಕಾರ್ಮಿಕರಿಗೆ ಗಂಭೀರವಾದ ಗಾಯಗಳಾಗಿವೆ.
ತಕ್ಷಣ ಗಾಯಾಳುಗಳನ್ನು ತಕ್ಷಣ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಸದ್ಯ ಘಟನಾ ಸ್ಥಳಕ್ಕೆ ಎಸ್ ಪಿ ಶ್ರೀನಿವಾಸ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ಕುರಿತಂತೆ ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.