ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಪ್ಲಾಸ್ಟಿಕ್ ಗೋದಾಮು ಒಂದು ಬೆಂಕಿಯ ಕೆನ್ನಾಲಿಗೆಗೆ ಹೊತ್ತಿ ಉರಿದಿರುವ ಘಟನೆ ಬೆಂಗಳೂರಿನ ಬೇಗೂರಿನಲ್ಲಿ ನಡೆದಿದೆ.
ಬೇಗುರಿನ ಅಕ್ಷಯನಗರದಲ್ಲಿರುವ ಹಳೆಯ ಪ್ಲಾಸ್ಟಿಕ್ ಗೋದಾಮಿನಲ್ಲಿ ಈ ಬೆಂಕಿ ಅವಘಡ ಸಂಭವಿಸಿದೆ. ಘಟನಾ ಸ್ಥಳಕ್ಕೆ ನಾಲ್ಕು ಅಗ್ನಿಶಾಮಕದಳ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದ್ದು, ಗೋದಾಮಿನಲ್ಲಿ ಇರುವ ಪ್ಲಾಸ್ಟಿಕ್ ವಸ್ತುಗಳು ದಗದಗನೆ ಹೊತ್ತಿ ಉರಿದಿವೆ. ಶಾರ್ಟ್ ಸರ್ಕ್ಯೂಟ್ ನಿಂದ ಈ ಒಂದು ಅಗ್ನಿ ದುರಂತ ಸಂಭವಿಸಿರಬಹುದು ಎಂದು ಶಂಕೆ ವ್ಯಕ್ತವಾಗಿದೆ.








