ಬೆಂಗಳೂರು : ಇತ್ತೀಚೆಗೆ ಬೆಂಗಳೂರಿನಲ್ಲಿ ಆಕಸ್ಮಿಕ ಹಾಗೂ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ದುರಂತಗಳು ಪದೇಪದೇ ಸಂಭವಿಸುತ್ತಲೇ ಇವೆ. ಬೆಂಗಳೂರಿನ ನಾಯಂಡಹಳ್ಳಿಯ ಪ್ಲಾಸ್ಟಿಕ್ ಬೋದಾಮಿನ ಶೆಡ್ನಲ್ಲಿ ಬೆಂಕಿ ದುರಂತ ಸಂಭವಿಸಿರುವುದು ತಡರಾತ್ರಿ ನಡೆದ ಘಟನೆಯಾಗಿದೆ.
ಬೆಂಗಳೂರಲ್ಲಿ ಪ್ಲಾಸ್ಟಿಕ್ ಗೋದಾಮಿನ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಗೋದಾಮೀನಾ ಪಕ್ಕ ನಿಲ್ಲಿಸಿದ್ದ ಆಟೋಗಳು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿವೆ.
ನಾಯಂಡಹಳ್ಳಿಯ ಗಂಗೊಂಡನಹಳ್ಳಿ ಬಳಿ ತಡರಾತ್ರಿ ನಡೆದ ಘಟನೆಯಾಗಿದೆ. ಎಂದು ಹೇಳಲಾಗುತ್ತಿದ್ದು, ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದೆ.
ಪಾರ್ಕಿಂಗ್ ಫೀಸ್ ಕೊಟ್ಟು ಇಲ್ಲಿ ಆಟೋ ಚಾಲಕರು ಆಟೋ ನಿಲ್ಲಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. ಅಗ್ನಿ ಅವಘಡದಲ್ಲಿ ಸುಮಾರು 40 ರಿಂದ 50 ಆಟೋಗಳು ಸಂಪೂರ್ಣವಾಗಿ ಸುಟ್ಟು ಬಸ್ಮವಾಗಿದೆ ಇದೆ ವೇಳೆ ಅಗ್ನಿ ಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದೆ. ಅಗ್ನಿ ದುರಂತಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗುತ್ತಿದೆ.
ಇನ್ನೂ ನಿನ್ನೆ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ದುರಂತ ಸಂಭವಿಸಿದ್ದು,ಪೇಪರ್ ಬಾಕ್ಸ್ ತಯಾರಿಕಾ ಕಾರ್ಖಾನೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿರುವ ಘಟನೆ ಗಂಗಮ್ಮನ ಗುಡಿ ವ್ಯಾಪ್ತಿಯಲ್ಲಿ ನಡೆದಿದೆ.
ಘಟನೆಯಲ್ಲಿ ಫ್ಯಾಕ್ಟರಿಯಲ್ಲಿದ್ದ ಬಾಕ್ಸ್ ಹಾಗೂ ವಸ್ತುಗಳು ಸುಟ್ಟು ಕರಕಲಾಗಿವೆ.ಗಂಗಮ್ಮನ ಗುಡಿ ವ್ಯಾಪ್ತಿಯಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ. ಘಟನೆಗೆ ಸಂಬಂಧಿಸಿದಂತೆ ಶಾರ್ಟ್ ಸರ್ಕ್ಯೂಟ್ ನಡೆದಿದೆ ಎಂದು ಹೇಳಲಾಗುತ್ತಿದೆ. ಈ ವೇಳೆ ಕಾರ್ಖಾನೆಯಲ್ಲಿ ಯಾರು ಇಲ್ಲದ ಕಾರಣದಿಂದ ಯಾವುದೇ ರೀತಿಯಾದಂತಹ ಪ್ರಾಣಾಪಾಯ ಸಂಭವಿಸಿಲ್ಲ.