ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಬೆಂಗಳೂರು ನಗರದಲ್ಲಿ ಅಗ್ನಿ ಅವಘಡಗಳು ಸಾಮಾನ್ಯವಾಗಿ ಬಿಟ್ಟಿವೆ. ಎಷ್ಟೇ ಮುಂಜಾಗ್ರತಾ ಕರ್ಮ ವಹಿಸಿಕೊಂಡರು ಆಗಾಗ ಇಂತಹ ಅಗ್ನಿ ದುರಂತಗಳು ಸಂಭವಿಸುತ್ತದೆ ಇದೀಗ ಬೆಂಗಳೂರಿನ ಕಲಾಸಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಿಲಿಂಡರ್ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.
‘ಪ್ರಧಾನಿ ಮೋದಿ’ ಸ್ವಾಗತಕ್ಕೆ 45 ಕಿ.ಮೀವರೆಗೆ ಸಾಲುಗಟ್ಟಿ ನಿಂತ ‘ಭೂತಾನ್ ಜನತೆ’
ಹೌದು ಬೆಂಗಳೂರಿನಲ್ಲಿ ಸಿಲಿಂಡರ್ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕಲಾಸಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಬಂದು ಬೆಂಕಿ ನಂದಿಸುವಲ್ಲಿ ಹರಸಾಹಸ ಪಡುತ್ತಿದ್ದಿದ್ದರೆ.
ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ
ಸಿಲಿಂಡರ್ ಗೋದಮಿಗೆ ಶಾರ್ಟ್ ಸರ್ಕ್ಯೂಟ್ ಇಂದ ಬೆಂಕಿ ಹತ್ತಿಕೊಂಡಿತೊ ಅಥವಾ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡಿತೊ ಹೇಗೆ ಬೆಂಕಿ ಹೊತ್ತಿ ಕೊಂಡಿತ್ತು ಎಂಬುದರ ಕುರಿತಂತೆ ಇದೀಗ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.ಘಟನಾ ಸ್ಥಳಕ್ಕೆ ಕಲಾಸಿಪಾಳ್ಯ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಘಟನೆ ಕುರಿತಂತೆ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ