ಬೆಂಗಳೂರು : ಬೆಂಗಳೂರಿನಲ್ಲಿ ಆಗಾಗ ಅಗ್ನಿ ಅವಘಡಗಳು ಸಂಭವಿಸುತ್ತಲೇ ಇರುತ್ತವೆ. ಇದೀಗ ಬೆಂಗಳೂರಿನ ತಿಗಳರಪಾಳ್ಯದಲ್ಲಿರುವ ಶನೇಶ್ವರ ನಗರದಲ್ಲಿ ಹಳೆ ವಸ್ತುಗಳನ್ನು ಸಂಗ್ರಹಿಸಿದ್ದ ಗೋದಾವಿನಲ್ಲಿ ಆಕಸ್ಮಿಕ ಅಗ್ನಿ ಸಂಭವಿಸಿದೆ.
ಬೆಂಗಳೂರಿನ ತಿಗಳರಪಾಳ್ಯ ಮುಖ್ಯ ರಸ್ತೆಯ ಶನೇಶ್ವರ ನಗರದಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ. ಸುಮಾರು 10ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ. ಘಟನೆ ಕುರಿತು ರಾಜಗೋಪಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.