ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಮತ್ತೊಂದು ಅಗ್ನಿ ದುರಂತ ಸಂಭವಿಸಿದ್ದು ಶಾರ್ಟ್ ಸರ್ಕ್ಯೂಟ್ ನಿಂದ ಗಾರ್ಮೆಂಟ್ ಗೋದಾಮಿನಲ್ಲಿ ಬೆಂಕಿ ಹತ್ತಿ ಹೊಡೆದಿದ್ದು ಗುದಾಮಿನಲ್ಲಿರುವಂತಹ ಬಟ್ಟೆ ವೆದರ್ ಸೇರಿದಂತೆ ಹಲೋ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಬೆಂಗಳೂರಿನ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.
ಹೌದು ಬೆಂಗಳೂರಿನಲ್ಲಿ ಗಾರ್ಮೆಂಟ್ಸ್ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿರುವ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಈ ಒಂದು ಗೋದಾಮಿನಲ್ಲಿ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಘಟನೆಯಲ್ಲಿ ಬಟ್ಟೆ, ಲೆದರ್ ಸೇರಿ ಕೆಮಿಕಲ್ ವಸ್ತುಗಳು ಸುಟ್ಟು ಕರಕಲಾಗಿವೆ. ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ.ಘಟನೆ ಕುರಿತು ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.
ನಿನ್ನೆ ಬೈಕ್ ಶೋ ರೂಂ ಗೂ ಬೆಂಕಿ!
ಇದಕ್ಕೂ ಮುನ್ನ ನಿನ್ನೆ ಸಂಜೆ ಬೆಂಗಳೂರಿನ ಮಹದೇವಪುರ ವ್ಯಾಪ್ತಿಯ ಬಿ.ನಾರಾಯಣಪುರದಲ್ಲಿ ಬೈಕ್ ಶೋರೂಂಗೆ ಬೆಂಕಿ ಬಿದ್ದು, ಲಕ್ಷಾಂತರ ರೂ. ಮೌಲ್ಯದ ಬೈಕ್ ಗಳು ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.
ಸಂಜೆ 7:30ರ ಸುಮಾರಿಗೆ ಯಮಹಾ ಬೈಕ್ ಶೋರೂಂನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಇಡೀ ಶೋರೂಂಗೆ ಹೊತ್ತಿಕೊಂಡಿದೆ. ಬೆಂಕಿಯ ಕೆನ್ನಾಲಿಗೆಗೆ ಬೈಕ್ ಗಳು ಸುಟ್ಟು ಕರಕಲಾಗಿವೆ. ಶೋರೂಂನಲ್ಲಿದ್ದ ಸುಮಾರು 30 ಬೈಕ್, ಹಿಂಭಾಗ ಸರ್ವೀಸ್ ಸೆಂಟರ್ ನಲ್ಲಿದ್ದ ಹತ್ತಕ್ಕೂ ಹೆಚ್ಚು ಬೈಕ್ ಸುಟ್ಟು ಭಸ್ಮವಾಗಿವೆ. ಮಹಾದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.