ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಮನೆಯಲ್ಲಿದ್ದ ಸೆಕೆಂಡ್ ಹ್ಯಾಂಡ್ ರೆಫ್ರಿಜರೇಟರ್ ಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಶಾತ್ ಮನೆಯಲ್ಲಿದ್ದ ಮೂರು ಯುವತಿಯರು ಪ್ರಾಣಪಾಯದಿಂದ ಪಾರಾಗಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ ನ ಕಾಡುಗೋಡಿ ಮುಖ್ಯ ರಸ್ತೆಯಲ್ಲಿ ಈ ಒಂದು ಘಟನೆ ನಡೆದಿದೆ.
ಹೌದು ರೆಫ್ರಿಜರೇಟರ್ ನಲ್ಲಿ ಬೆಂಕಿ ಕಾಣಿಸಿಕೊಂಡು ಇಡೀ ಮನೆ ಬೆಂಕಿಗೆ ಅಹುತಿಯಾಗಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ ನ ಕಾಡುಗೋಡಿ ಮುಖ್ಯ ರಸ್ತೆಯಲ್ಲಿ ಈ ಒಂದು ಘಟನೆ ನಡೆದಿದೆ. ಬೆಂಕಿಗೆ ಆಹುತಿಯಾದ ಮನೆಯಲ್ಲಿ ಮೂವರು ಯುವತಿಯರು ಇದ್ದರು. ಎರಡು ವರ್ಷದ ಹಿಂದೆ ಸೆಕೆಂಡ್ ಹ್ಯಾಂಡ್ ರೆಫ್ರಿಜಿರೇಟರ್ ಅನ್ನು ಖರೀದಿಸಿದ್ದರು.ರೆಫ್ರಿಜರೇಟರ್ ನಲ್ಲಿ ಇಂದು ಏಕಾಏಕಿ ಬೆಂಕಿ ಕಾಣಿಸಿಕೊಂಡಿತ್ತು.
ಬೆಂಕಿ ನಂದಿಸಲು ಯತ್ನಿಸಿದರು ಕೂಡ ನಂದಿಸಲು ಸಾಧ್ಯವಾಗಿರಲಿಲ್ಲ.
ಮನೆಯಲ್ಲಿದ್ದ ಬಹುತೇಕ ವಸ್ತುಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿವೆ. ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ಅಗ್ನಿಶಾಮಕದಳ ಸಿಬ್ಬಂದಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಿಲಿಂಡರ್ ಗೆ ಬೆಂಕಿ ತಗುಲದಿದ್ದರಿಂದ ಭಾರಿ ಅನಾಹುತ ಒಂದು ತಪ್ಪಿದೆ.ಘಟನೆ ಕುರಿತು ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.