ಹಾವೇರಿ : ಇಂದು ರಾಜ್ಯದಲ್ಲಿ ಪ್ರತ್ಯೇಕ ಮೂರು ಅಗ್ನಿ ಅವಘಡಗಳು ಸಂಭವಿಸಿವೆ. ಮೊದಲನೆಯದಾಗಿ ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಿಲಿಂಡರ್ ಸ್ಫೋಟಗೊಂಡು 7 ಜನ ಗಾಯಗೊಂಡಿದ್ದಾರೆ. ಬಳಿಕ ಬೆಂಗಳೂರಿನ ನೆಲಮಂಗಲದಲ್ಲಿ ಗಾರ್ಮೆಂಟ್ಸ್ ಅಂಗಡಿಗೆ ಬೆಂಕಿ ತಗುಲಿ 40 ಲಕ್ಷಕ್ಕೂ ಅಧಿಕ ಬಟ್ಟೆಗಳು ಸುಟ್ಟು ಕರಕಲಾಗಿವೆ. ಇದೀಗ ಹಾವೇರಿಯಲ್ಲಿ ಫ್ರಿಡ್ಜ್ ಸ್ಪೋಟಗೊಂಡು ಎರಡು ಲಕ್ಷಕ್ಕೂ ಅಧಿಕ ವಸ್ತುಗಳು ಸುಟ್ಟು ಭಸ್ಮವಾಗಿದೆ.
ಹೌದು ಹಾವೇರಿಯ ಮಂಜುನಾಥ ನಗರದಲ್ಲಿ ಫ್ರಿಡ್ಜ್ ಸ್ಫೋಟಗೊಂಡಿರುವ ಘಟನೆ ನಡೆದಿದೆ. ನಗರದ ಚನ್ನಬಸಪ್ಪ ಗೂಳಪ್ಪನವರ್ ಎಂಬುವರಿಗೆ ಸೇರಿದ ಮನೆಯಲ್ಲಿ ಈ ದುರ್ಘಟನೆ ನಡೆದಿದೆ. ಮನೆಯಲ್ಲಿದ್ದ ಎರಡು ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ.
ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ.ಅಗ್ನಿ ಅವಘಡದ ಕುರಿತು ಹಾವೇರಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಯಾವ ಕಾರಣಕ್ಕಾಗಿ ಫ್ರಿಡ್ಜ್ ಸ್ಪೋಟಗೊಂಡಿದೆ ಎಂದು ಪೊಲೀಸರು ಇದೀಗ ತನಿಖೆ ಕೈಗೊಂಡಿದ್ದಾರೆ.