ಮೈಸೂರು : ನಿನ್ನೆ ತಾನೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಕಿಡಿಗೇಡಿಗಳು ಹೊತ್ತಿಸಿದ ಬೆಂಕಿಗೆ ಇಡೀ ಚಾಮುಂಡಿ ಬೆಟ್ಟವೆ ಹೊತ್ತಿ ಉರಿದಿರುವ ಘಟನೆ ನಡೆದಿತ್ತು. ಇದೀಗ ಈ ಒಂದು ಘಟನೆ ಮಾಸುವ ಮುನ್ನವೇ ಮೈಸೂರಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ.
ಹೌದು ಮೈಸೂರು ನಗರದಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ವಸ್ತು ಪ್ರದರ್ಶನ ಆವರಣದಲ್ಲಿ ಬೆಂಕಿ ಹೊತ್ತಿ ಉರಿದಿರುವ ಘಟನೆ ನಡೆದಿದೆ. ಡಾಲಿ ಮದುವೆಗೆ ಈ ಒಂದು ಹಾಕಲಾಗಿದ್ದ ಸೆಟ್ ಬಳಿ ಈ ಒಂದು ಘಟನೆ ನಡೆದಿದೆ. ಬೆಂಕಿಯಿಂದ ಮೈಸೂರು ನಗರದಲ್ಲಿ ದಟ್ಟ ಹೊಗೆ ಆವರಿಸಿದೆ.
ಡಾಲಿ ಮದುವೆ ಬಳಿಕ ಈ ಒಂದು ತ್ಯಾಜ್ಯ ಹಾಕಲಾಗಿತ್ತು. ಕಿಡಿಗೇಡಿಗಳು ಈ ಒಂದು ತ್ಯಾಜ್ಯಕ್ಕೆ ಬೆಂಕಿ ಹಾಕಿರುವ ಶಂಕೆ ಇದೀಗ ವ್ಯಕ್ತವಾಗುತ್ತದೆ. ದಟ್ಟ ಹೊಗೆಯಿಂದಾಗಿ ಇದೀಗ ಮೈಸೂರು ನಗರ ಸಂಪೂರ್ಣವಾಗಿ ಹೊಗೆಮಯವಾಗಿದೆ. ವಸ್ತು ಪ್ರದರ್ಶನ ಆವರಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಬಂದು ಬೆಂಕಿ ನಂದಿಸುತ್ತಿದ್ದಾರೆ.