ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಜೂಪಿಟರ್ ಟೆಕ್ನಾಲಜಿಸ್ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡು ಕೋಟ್ಯಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ.
ಬೆಂಗಳೂರಿನ ಆನೇಕಲ್ ನ ಜಿಗಣಿ ಕೈಗಾರಿಕಾ ಪ್ರದೇಶದ ಜೂಪಿಟರ್ ಟೆಕ್ನಾಲಜಿಸ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಮುಂಜಾನೆ 4 ಗಂಟೆಗೆ ಅವಘಡ ಸಂಭವಿಸಿದ್ದು, ಕೋಟ್ಯಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿದೆ.
ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ.








