ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಐರೆನ್ ಬಾಕ್ಸ್ ನಿಂದ ಸಂಪೂರ್ಣ ಮನೆಯೇ ಹೊತ್ತಿ ಉರಿದಿರುವ ಘಟನೆ ನಡೆದಿದೆ.
ಬೆಂಗಳೂರಿನ ಮಲ್ಲೇಶ್ವರಂ ನ 13 ನೇ ಕ್ರಾಸ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬಟ್ಟೆ ಐರನ್ ಮಾಡಿದ ಬಳಿಕ ಸ್ವಿಚ್ ಆಫ್ ಮಾಡದೇ ಮನೆಗೆ ಬೀಗ ಹಾಕಿ ಹೋಗಿದ್ದು, ಇದರಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಶಂಕಿಸಲಾಗಿದೆ.
ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ.