ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, 40 ಕ್ಕೂ ಹೆಚ್ಚು ಕೂಲಿ ಕಾರ್ಮಿಕರ ಶೆಡ್ ಗಳು ಸುಟ್ಟು ಭಸ್ಮವಾಗಿವೆ.
ಬೆಂಗಳೂರಿನ ವೀರಣ್ಣಪಾಳ್ಯದಲ್ಲಿರುವ ಕಾರ್ಮಿಕರ ಶೆಡ್ ಗೆ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿದ್ದು, 40 ಕ್ಕೂ ಹೆಚ್ಚು ಶೆಡ್ ಗಳು ಬೆಂಕಿಗಾಹುತಿಯಾಗಿವೆ. ಆಟಿಕೆ ಫ್ಯಾಕ್ಟರಿ ಕಾರ್ಮಿಕರಿಗೆ 50 ಶೆಡ್ ಗಳನ್ನು ನಿರ್ಮಿಸಲಾಗಿದ್ದು, ಈ ಪೈಕಿ 40 ಶೆಡ್ ಗಳು ಸುಟ್ಟು ಹೋಗಿವೆ.
ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಗೋವಿಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.