ಬೆಳಗಾವಿ : ರಾಜ್ಯದಲ್ಲಿ ಮತ್ತೊಂದು ಸಾಮೂಹಿಕ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದ್ದು, ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು 6 ಜನರಿಂದ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ.
ಬೆಳಗಾವಿ ತಾಲೂಕಿನ ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಾಲಕಿ ಮೇಲೆ 6 ಮಂದಿ ಕಾಮುಕರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ.
ಕಾಮುಕರು ಬಾಲಕಿ ಮೇಲೆ ಎರಡು ಬಾರಿ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ. 6 ತಿಂಗಳ ಹಿಂದೆ ಗ್ಯಾಂಗ್ ರೇಪ್ ಮಾಡಿ ವಿಡಿಯೋ ಮಾಡಿಕೊಂಡಿದ್ದರು. ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲೆ ಮಾಡಿ ಮತ್ತೊಮ್ಮೆ ರೇಪ್ ಮಾಡಿದ್ದಾರೆ. ಈಗ ಅದೇ ವಿಡಿಯೋ ಇಟ್ಟುಕೊಂಡು ಬಾಲಕಿಗೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.