ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡಿದ್ದು, ಓರ್ವ ಕಾರ್ಮಿಕ ಗಾಯಗೊಂಡಿರುವ ಘಟನೆ ನಡೆದಿದೆ.
ಬೆಂಗಳೂರಿನ ಆನೇಕಲ್ ತಾಲೂಕಿನ ನೆರಳೂರು ಬಳಿ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡಿದ್ದು, ಸ್ಪೋಟದ ತೀವ್ರತೆಗೆ ಮನೆಯ ಛಾವಣಿ ಛಿದ್ರಛಿದ್ರವಾಗಿದೆ. ಘಟನೆಯಲ್ಲಿ ಬಿಹಾರದ ಮೂಲದ 38 ವರ್ಷದ ದಿನೇಶ್ ದಾಸ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ದಿನೇಶ್ ದಾಸ್ ಬೆಳಗ್ಗೆ ಎದ್ದು ಮನೆಯಲ್ಲಿದ್ದ ಲೈಟ್ ಹಾಕಿದ ಕೂಡಲೇ ಸಿಲಿಂಡರ್ ಬ್ಲಾಸ್ಟ್ ಆಗಿದ್ದು, ಸದ್ಯ ದಿನೇಶ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.