ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವಂತಹ ಭೀಕರ ಕೊಲೆ ನಡೆದಿದ್ದು ಕತ್ತು ಕೊಯ್ದು ಸ್ಟಾಫ್ ನರ್ಸ್ ನನ್ನು ಬರ್ಬರವಾಗಿ ಹತ್ಯೆಗೈಯ್ಯಲಾಗಿದೆ. ಬೆಂಗಳೂರಿನ ಜಯದೇವ ಆಸ್ಪತ್ರೆಯ ಸ್ಟಾಫ್ನರ್ಸ್ ಮಮತಾ (39) ಭೀಕರವಾಗಿ ಕೊಲೆಯಾಗಿದ್ದಾರೆ.
ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ನ ಬಾಡಿಗೆ ಮನೆಯಲ್ಲಿ ಈ ಒಂದು ಕೊಲೆ ನಡೆದಿದ್ದು, ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಡಿಸೆಂಬರ್ 24ರಂದು ರಾತ್ರಿ ಸ್ಟಾಫ್ ನರ್ಸ್ ಮಮತಾ ಕೊಲೆ ನಡೆದಿದೆ. ಆದರೆ ಡಿಸೆಂಬರ್ 25 ರಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಕೊಲೆಯಾಗಿರುವ ಮಮತಾಗಿ ಮದುವೆ ಆಗಿರಲಿಲ್ಲ.
ಜಯದೇವ ಆಸ್ಪತ್ರೆಯಲ್ಲಿ ಸ್ಟಾಪ್ ನರ್ಸ್ ಆಗಿ ಮಮತಾ ಕೆಲಸ ಮಾಡುತ್ತಿದ್ದರು. ಸ್ನೇಹಿತೆಯ ಜೊತೆ ಮನೆ ಮಾಡಿಕೊಂಡು ಮತ ವಾಸವಿದ್ದಳು.ಡಿಸೆಂಬರ್ 24ರಂದು ಸ್ನೇಹಿತೆ ಊರಿಗೆ ತೆರಳಿದ್ದಾಳೆ. ಈ ವೇಳೆ ಮನೆಯಲ್ಲಿ ಒಬ್ಬಳೇ ಇದ್ದಾಗ ಕತ್ತು ಕೊಯ್ದು ಭೀಕರವಾಗಿ ಕೊಲೆ ಮಾಡಲಾಗಿದೆ. ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ಎಫ್ಐಆರ್ ದಾಖಲಾಗಿದೆ. ಆರೋಪಿ ಪತ್ತೆಗಾಗಿ ಕುಮಾರಸ್ವಾಮಿ ಲೇಔಟ್ ಠಾಣೆ ಪೊಲೀಸರು ಬಲೆ ಬೀಸಿದ್ದಾರೆ.








