ಧಾರವಾಡ : ರಾಜ್ಯದಲ್ಲಿ ಮತ್ತೊಂದು ಭೀಕರ ಮರ್ಡರ್ ನಡೆದಿದ್ದು, ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ.
ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಹುಣಸಿಕಟ್ಟಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವಿಠ್ಠಲ ಕೊರಾಡೆ (29) ಎಂಬುವರನ್ನು ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಹುಬ್ಬಳ್ಳಿ ತಾಲೂಕಿನ ರಾಮನಕೊಪ್ಪದ ನಿವಾಸಿಯಾಗಿದ್ದು, ಹುಣಸಿಕಟ್ಟಿ ಗ್ರಾಮದಲ್ಲಿರುವ ಪತ್ನಿ ಮನೆಗೆ ಬಂದಿದ್ದ ವಿಠ್ಠಲ ಕೊರಾಡೆಯನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಕಲಘಟಗಿ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.







