ಬೆಳಗಾವಿ : ರಾಜ್ಯದಲ್ಲಿ ಮತ್ತೊಂದು ಭೀಕರ ಹತ್ಯೆಯಾಗಿದ್ದು, ಕೆಲಸ ಮುಗಿಸಿ ಹೋಗುತ್ತಿದ್ದ ಮಹಿಳೆ ತಲೆಗೆ ರಾಡ್ ನಿಂದ ಹೊಡೆದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿಯ ಸದಾಶಿವನಗರದಲ್ಲಿ ನಿನ್ನೆ ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಮಹಿಳೆ ತಲೆಗೆ ರಾಡ್ ನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹೋಟೆಲ್ ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಮಹಾದೇವಿಗೆ ಹಿಂಬದಿಯಿಂದ ರಾಡ್ ನಿಂದ ಹೊಡೆದು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.