ಕೊಡಗು : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ಒಂದು ನಡೆದಿದ್ದು, ಕೊಡಗು ಜಿಲ್ಲೆಯಲ್ಲಿ ವಿದೇಶಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಕೊಡಗಿನ ದೇವಿ ವಿಲ್ಲಾ ಹೋಂ ಸ್ಟೇನಲ್ಲಿ ಈ ಒಂದು ಘನಗೋರ ಕೃತ್ಯ ನಡೆದಿದೆ.ಅಮೇರಿಕಾದ ವಾಷಿಂಗ್ಟನ್ ಮೂಲದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ.
ಏಪ್ರಿಲ್ 19ರಂದು ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ದೇವಿ ವಿಲ್ಲಾ ಹೋಂ ಸ್ಟೇನಲ್ಲಿ ಈ ಒಂದು ಕೃತ್ಯ ನಡೆದಿದ್ದು, ತಡವಾಗಿ ಬಳಕೆಗೆ ಬಂದಿದೆ. ಜಾರ್ಖಂಡ್ ಮೂಲದ ವೃಜೇಶ್ ಕುಮಾರ್ ಲೈಂಗಿಕ ದೌರ್ಜನ್ಯ ಎಸಗಿರುವಂತಹ ಆರೋಪಿಯಾಗಿದ್ದು ಹೋಂಸ್ಟೇ ಮಾಲೀಕ ವಿಶಾಲ್ ಮತ್ತು ವೃಜೆಶ್ ನನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕುಟ್ಟ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು ಪೊಲೀಸರು ಇಬ್ಬರನ್ನು ಅರೆಸ್ಟ್ ಮಾಡಿದ್ದು ವಿಚಾರಣೆಗೆ ಒಳಪಡಿಸಿದ್ದಾರೆ.








