ಹುಬ್ಬಳ್ಳಿ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಹುಬ್ಬಳ್ಳಿ ನಗರದಲ್ಲಿ ಅಪ್ರಾಪ್ತೆ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಹುಬ್ಬಳ್ಳಿಯ ಶಹರ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ಒಂದು ವಾರದಲ್ಲಿ ಪರಿಚಯಸ್ಥ ಮೂವರು ಬಾಲಕರಿಂದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆ.
ಕಳೆದ ವಾರ ನಡೆದಿದ್ದ ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ. ನೊಂದ ಬಾಲಕಿ ಮತ್ತು ಆಕೆಯ ತಾಯಿ ದೂರು ನೀಡಿದ್ದು ಮೂವರು ಅಪ್ರಾಪ್ತ ಬಾಲಕರನ್ನು ಸದ್ಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅತ್ಯಾಚಾರದ ವೇಳೆ ಲೈಂಗಿಕ ದೌರ್ಜನ್ಯದ ವಿಡಿಯೋ ಮಾಡಿ ಇಟ್ಟುಕೊಂಡಿದ್ದರು. ಬಾಲಕರ ವಿರುದ್ಧ ಹುಬ್ಬಳ್ಳಿ ಶಹರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.








