ಬೆಳಗಾವಿ : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿವೆ. ಇದೀಗ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಕಾಮುಕನೊಬ್ಬ 13 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದು, ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಹೌದು ಅಪ್ರಾಪ್ತೆಯ ಮೇಲೆ ಕಾಮುಕನೋರ್ವ ಅತ್ಯಾಚಾರಕ್ಕೆ ಯತ್ನಿಸಿ ಜೈಲು ಸೇರಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಐಗಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 13 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕ ಮಹಾಂತೇಶ ಹಿಪ್ಪರಗಿಗೆ ಪೊಲೀಸರು ಕೈಗೆ ಕೋಳ ತೊಡಿಸಿದ್ದಾರೆ.
ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಕೂಡಲೇ ಬಾಲಕಿ ಪೋಷಕರಿಗೆ ಈ ಕುರಿತು ಮಾಹಿತಿ ನೀಡಿದ್ದಾಳೆ. ಬಳಿಕ ಐಗಳಿ ಪೊಲೀಸ್‌ರಿಗೆ ಅಪ್ರಾಪ್ತೆ ಬಾಲಕಿಯ ಪೋಷಕರು ದೂರು ನೀಡಿದ್ದಾರೆ. ಆರೋಪಿಯ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಿಕೊಂಡ ಐಗಳಿ ಪೊಲೀಸರು,ಬಳಿಕ ಒದ್ದು ಜೈಲಿಗೆ ಅಟ್ಟಿದ್ದಾರೆ. ಘಟನೆ ಸಂಬಂಧ ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.