ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಹುಟ್ಟು ಹಬ್ಬದ ದಿನದಂದೇ ಕೇಕ್ ಕಟ್ ಮಾಡುವ ನೆಪದಲ್ಲಿ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೋಯ್ದು ಕಾಮಕನೊಬ್ಬ ಅತ್ಯಾಚಾರ ಎಸಗಿರುವ ಘಟನೆ ಇದೀಗ ವರದಿಯಾಗಿದೆ.
ಹೌದು ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸಂತ್ರಸ್ತ ಬಾಲಕಿ ಹುಟ್ಟಿದ ಹಬ್ಬದ ಹಿನ್ನೆಲೆಯಲ್ಲಿ ಕೇಕ್ ಕಟ್ ಮಾಡುವ ನೆಪದಲ್ಲಿ ಬಾಲಕಿಯನ್ನು ಕರೆದೋಯ್ದು ಅತ್ಯಾಚಾರ ಎಸಗಿದ್ದಾನೆ ಯತೀಶ್ (26) ಎಂಬಾತನಿಂದ ಈ ಒಂದು ಕೃತ್ಯ ನಡೆದಿದೆ. ನಿನ್ನೆ ಸಂಜೆ 7:30 ಸಮಯದಲ್ಲಿ ಈ ಒಂದು ಘಟನೆ ನಡೆದಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.








