ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು ಸ್ನೇಹಿತನಿಂದಲೇ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿ ಬಂದಿದೆ. ಸ್ನೇಹಿತ ಅಷ್ಟೆ ಅಲ್ಲದೇ ಆತನ ತಂದೆ ಸಹ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿ ಬಂದಿದೆ.
ಬೆಂಗಳೂರಿನ ಸುಬ್ರಮಣ್ಯ ನಗರ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ. ಯುವತಿಯ ಸ್ನೇಹಿತ ನಿರಂಜನ್ ಹಾಗು ಆತನ ತಂದೆ ರಾಜಶೇಖರ್ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು ಅಲ್ಲದೆ ಬ್ಲಾಕ್ ಮೇಲ್ ಮಾಡಿರುವ ಆರೋಪ ಕೇಳಿ ಬಂದಿದ್ದು ವಿಡಿಯೋ ಮಾಡಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. ಇದೆ ವೇಳೆ ನಿರಂಜನ್ ತಂದೆಯಿಂದಲೂ ಬ್ಲಾಕ್ ಮೇಲ್ ಆರೋಪ ಕೇಳಿ ಬಂದಿದೆ ಸದ್ಯ ನಿರಂಜನ್ ಹಾಗು ರಾಜಶೇಖರ್ ವಿರುದ್ಧ ಇದೀಗ ಎಫ್ಐಆರ್ ದಾಖಲಾಗಿದೆ.ಸುಬ್ರಮಣ್ಯ ನಗರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.