ಬೆಂಗಳೂರು : ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಎಷ್ಟೇ ಸಂಚಾರಿ ಕಠಿಣ ನಿಯಮಗಳನ್ನು ತಂದರು, ಅಪಘಾತಗಳ ಸಂಖ್ಯೆ ಮಾತ್ರ ಕಡಿಮೆಯಾಗುತ್ತಿಲ್ಲ. ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕೆಸ್ತೂರು ಗೇಟ್ ಬಳಿ ಹಿಟ್ ಅಂಡ್ ರನ್ ಗೆ ಪಾದಚಾರಿ ಸಾವನ್ನಪ್ಪಿದ್ದಾರೆ.
ಹೌದು ಕೆಸ್ತೂರು ಗೇಟ್ ಬಳಿ ಹಿಟ್ ಅಂಡ್ ರನ್ನಿಗೆ ನರಸಿಂಹಮೂರ್ತಿ (63) ಎನ್ನುವ ಪಾದಾಚಾರಿ ಬಲಿಯಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಅಪಘಾತದ ನಂತರ ವಾಹನ ಸಮೇತ ಚಾಲಕ ಪರಾರಿಯಾಗಿದ್ದು, ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.