ಬೆಂಗಳೂರು : ಬೆಂಗಳೂರಲ್ಲಿ ಆಗಾಗ ಹಿಟ್ ಅಂಡ್ ರನ್ ಪ್ರಕರಣಗಳು ನಡೆಯುತ್ತಿರುತ್ತವೆ. ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರದ ಬೈಪಾಸ್ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿ ಆದ ಪರಿಣಾಮ ಬೈಕ್ ನಲ್ಲಿ ತೆರಳುತ್ತಿದ್ದ ಮಹಿಳೆ ಸೇರಿದಂತೆ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಹೌದು ಹಿಟ್ ಅಂಡ್ ರನ್ ಗೆ ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ಬಲಿಯಾಗಿದ್ದಾರೆ. ಬೈಕಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಸಾವನಪ್ಪಿದ್ದಾರೆ. ವಿಜಯಪುರ ಬೈಪಾಸ್ನ ಸಿಲ್ಕ್ ಫ್ಯಾಕ್ಟರಿ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ವಿಜಯಪುರ ಸಿಲ್ಕ್ ಫ್ಯಾಕ್ಟರಿ ಬಳಿ ಬೈಕ್ ಸವಾರ ಮತ್ತು ಮಹಿಳೆ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ.ಅಪಘಾತದ ಕುರಿತು ವಿಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.