ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬೆಂಗಳೂರಿನ ಮೆಯೋಹಾಲ್ ಜಂಕ್ಷನ್ ನಲ್ಲಿ ನಿಂತಿದ್ದ ಕಾರಿಗೆ ಗೂಡ್ಸ್ ವಾಹನ ಡಿಕ್ಕಿ ಹೊಡೆದಿದ್ದು, ಪರಿಣಾಮ ಕಾರು ಮುಂದೆ ಇದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ. ಈ ಸಂದರ್ಭದಲ್ಲಿ ಬೈಕ್ ನಲ್ಲಿದ್ದ ಮಹಿಳೆ ಸಾವನ್ನಪ್ಪಿದ್ದಾರೆ. ಮೃತ ಮಹಿಳೆಯನ್ನು ಅಂಜಲಿ (36) ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ಬೈಕ್ ನಲ್ಲಿದ್ದ ವಿಜಯ್ ಕುಮಾರ್ ಗೆ ಗಂಭೀರವಾಗಿ ಗಾಯವಾಗಿದೆ, ವಿಜಯ್ ಕುಮಾರ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಸಂಬಂಧ ಅಶೋಕನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.