ಮಂಡ್ಯ : ರಾಜ್ಯದಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, 3 ಕೆ ಎಸ್ ಆರ್ ಟಿ ಸಿ ಬಸ್ಗಳ ನಡುವೆ ಡಿಕ್ಕಿಯಾಗಿ ಸುಮಾರು 30ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದ್ದು, 10 ಪ್ರಯಾಣಿಕರ ಸ್ಥಿತಿ ಗಂಭೀರವಾಗಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬಾಚನಹಳ್ಳಿ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ.
ಮಳವಳ್ಳಿ ಮತ್ತು ಕೊಳ್ಳೇಗಾಲ ಹೆದ್ದಾರಿಯಲ್ಲಿ ಮೂರು ಸರ್ಕಾರಿ ಬಸ್ ನಡುವೆ ಡಿಕ್ಕಿ ಸಂಭವಿಸಿ ಈ ಒಂದು ಅಪಘಾತ ಸಂಭವಿಸಿದೆ. ಮುಖಾಮುಖಿ ಡಿಕ್ಕಿಯಾಗಿತ್ತು. ಮೊದಲು ಎರಡು ಕೆಎಸ್ಆರ್ಟಿಸಿ ಬಸ್ ಗಳ ನಡುವೆ ಡಿಕ್ಕಿಯಾಗಿತ್ತು. ಅಪಘಾತಕ್ಕೆ ಈಡಾಗಿದ್ದ ಬಸ್ಗೆ ಮತ್ತೊಂದು ಕೆ ಎಸ್ ಆರ್ ಟಿ ಸಿ ಬಸ್ ಬಂದು ಡಿಕ್ಕಿ ಹೊಡೆದಿದೆ. ಮೂರು ಬಸ್ಗಳಲ್ಲಿದ್ದ 30ಕ್ಕೂ ಹೆಚ್ಚು ಜನರಿಗೆ ಗಯಗಳಾಗಿದ್ದು 10 ಜನರ ಸ್ಥಿತಿ ಗಂಭೀರವಾಗಿದೆ ಗಯಾಳುಗಳಿಗೆ ಮಳವಳ್ಳಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತ ಸ್ಥಳಕ್ಕೆ ಮಳವಳ್ಳಿ ಗ್ರಾಮಾಂತರ ಠಾಣೆ ಪೊಲೀಸ್ರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.