ಧಾರವಾಡ : ರಾಜ್ಯದಲ್ಲಿ ಮತ್ತೊಂದು ಘೋರ ಘಟನೆ ಬೆಳಕಿಗೆ ಬಂದಿದ್ದು, ಇಬ್ಬರು ಮಕ್ಕಳಿಗೆ ವಿಷ ಕುಡಿಸಿ ತಾಯಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ.
ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಯಮನೂರು ಬಳಿ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳಿಗೆ ವಿಷ ಕುಡಿಸಿ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೇ ಸ್ಥಳೀಯರು ಮೂವರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೂವರ ಪೈಕಿ ಮಕ್ಕಳಾದ ಫಯಾಜ್ (8) ಹಾಗೂ ಆರೀಫ್ (9) ಸ್ಥಿತಿ ಗಂಭೀರವಾಗಿದ್ದು, ತಾಯಿ ಮಾಲಾಂಬಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ಮೂವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕೌಟುಂಬಿಕ ಕಲಹಕ್ಕೆ ಬೇಸತ್ತು ತಾಯಿ ತನ್ನ ಇಬ್ಬರು ಮಕ್ಕಳಿಗೆ ಅನ್ನದಲ್ಲಿ ವಿಷ ಹಾಕಿ ಕೊಟ್ಟಿದ್ದಾಳೆ. ಬಳಿಕ ತಾನೂ ಕೂಡ ವಿಷ ಮಿಶ್ರಿತ ಅನ್ನವನ್ನು ಸೇವಿಸಿದ್ದಾಳೆ. ಏನೂ ಅರಿಯದ ಇಬ್ಬರು ಮಕ್ಕಳು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.