ದಾವಣಗೆರೆ : ದಾವಣಗೆರೆಯಲ್ಲಿ ಘೋರವಾದ ದುರಂತ ಸಂಭವಿಸಿದ್ದು, ಬಟ್ಟೆ ತೊಳೆಯಲು ಹೋದಾಗ, ಕಾಲು ಜಾರಿ ಕೆರೆಗೆ ಬಿದ್ದು ಮೂವರು ಮಹಿಳೆಯರು ಸಾವನ್ನಪ್ಪಿರುವ ಘಟನೆ, ದಾವಣಗೆರೆ ಜಿಲ್ಲೆಯ ಚೆನ್ನಗಿರಿ ತಾಲೂಕಿನ ಲಕ್ಷ್ಮಿಸಾಗರ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ.
ದಾವಣಗೆರೆ ಜಿಲ್ಕೆಯ ಚೆನ್ನಗಿರಿ ತಾಲೂಕಿನ ಲಕ್ಷ್ಮಿಸಾಗರ ಹಾಗೂ ದಿಗ್ಗೇನಹಳ್ಳಿ ಗ್ರಾಮಗಳ ಬಳಿ ಈ ಒಂದು ಘಟನೆ ನಡೆದಿದೆ. ಬಟ್ಟೆ ತೊಳೆಯಲು ಹೋಗಿ ಕಾಲು ಜಾರಿ ಕೆರೆಗೆ ಬಿದ್ದು ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ. ದೀಪಾ (28) ದಿವ್ಯ (26) ಹಾಗೂ ಚಂದನಾ (19) ಮೃತ ಮಹಿಳೆಯರು ಎಂದು ತಿಳಿದುಬಂದಿದೆ. ಶವಗಳನ್ನು ಅಗ್ನಿಶಾಮಕದಳ ಸಿಬ್ಬಂದಿಗಳು ಕೆರೆಯಿಂದ ಮೇಲೆತ್ತಿದ್ದಾರೆ. ಚೆನ್ನಗಿರಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.