ವಿಜಯಪುರ : ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ್ ತಾಲೂಕಿನ ಗೆದ್ದಲಮರಿ ಗ್ರಾಮದಲ್ಲಿ ಪತ್ನಿಯನ್ನು ಕೊಂದು ಪತಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಗೆದ್ದಲಮರಿ ಗ್ರಾಮದಲ್ಲಿ ದಂಪತಿಯ ಶವ ಪತ್ತೆಯಾಗಿದ್ದು, ಪತ್ನಿಯನ್ನು ಉಸಿರುಗಟ್ಟಿ ಕೊಂದು ಬಳಿಕ ಪತಿಯೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.
ಗ್ರಾಮದ ಸಿದ್ದಪ್ಪ ಹರನಾಳ ಹಾಗೂ ಪತ್ನಿ ಮೇಘನಾ ಹರನಾಳ ಶವ ಪತ್ತೆಯಾಗಿದ್ದು, 8 ವರ್ಷಗಳ ಹಿಂದೆ ದಂಪತಿ ವಿವಾಹವಾಗಿದ್ದು, ಸಿದ್ದಪ್ಪ ತಾಯಿ ಶಾಂತಮ್ಮ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು
ಮೇಘನಾ ತಾಯಿ ಗೆದ್ದಮ್ಮ ಆರೋಪಿಸಿದ್ದಾರೆ. ಸ್ಥಳಕ್ಕೆ ಡಿವೈಎಸ್ ಪಿ ಬಾಲಣ್ಣ ನಂದಗಾವಿ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಶವಗಳನ್ನು ವಿಜಯಪುರದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.