ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬಿಎಂಟಿಸಿ ಬಸ್ ಹರಿದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಂಗಳೂರಿನ ನಾಯಂಡನಹಳ್ಳಿ ಬಳಿ ಮದುವೆ ಮುಗಿಸಿಕೊಂಡು ಸೋದರನ ಜೊತೆಗೆ ಬರುವಾಗ ಮುಂದೆ ನಿಂತಿದ್ದ ಕಾರಿನ ಡೋರ್ ಏಕಾಏಕಿ ತೆಗೆದಿದ್ದು, ಈ ವೇಳೆ ಡೋರ್ ಟಚ್ ಆಗಿ ಬೈಕ್ ನಿಂದ ಮಹಿಳೆ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಹಿಂದೆ ಬರುತ್ತಿದ್ದ ಬಸ್ ಹರಿದು ಮಹಿಳೆ ಸಾವನ್ನಪ್ಪಿದ್ದಾರೆ.
ಮೃತ ಮಹಿಳೆಯನ್ನು ಕಾಮಾಕ್ಷಿಪಾಳ್ಯದ ಸರೋಜಾ (41) ಎಂದು ಗುರುತಿಸಲಾಗಿದೆ. ಬ್ಯಾಟರಾಯನಪುರ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.