ಕೇರಳ : ಬೆಳ್ಳಂಬೆಳಗ್ಗೆ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಕಾರು ಡಿಕ್ಕಿಯಾದ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಕೇರಳದ ಕಾಸರಗೋಡು ಜಿಲ್ಲೆ ವಾಮಂಜೂರು ಚೆಕ್ ಪೋಸ್ಟ್ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಮೃತರನ್ನು ಜನಾರ್ದನ ಹಾಗೂ ಪುತ್ರರಾದ ವರುಣ್, ಕಿಶಾನ್ ಎಂದು ಗುರುತಿಸಲಾಗಿದೆ. ರತ್ನಾ ಎಂಬುವರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.