ವಿಜಯಪುರ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಕಾರ್ಪಿಯೋ ಕಾರು ಹಾಗೂ ಖಾಸಗಿ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ಐವರು ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.
ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಈ ಅಪಘಾತ ಸಂಭವಿಸಿದೆ. ಸ್ಕಾರ್ಪಿಯೋ ಕಾರು ಹಾಗೂ ಖಾಸಗಿ ಬಸ್ ನಡುವೆ ಡಿಕ್ಕಿಯಾಗಿದ್ದು, ಸ್ಕಾರ್ಪಿಯೋದಲ್ಲಿದ್ದ ನಾಲ್ವರು ಹಾಗೂ ಕಾರಿನಲ್ಲಿದ್ದ ಓರ್ವ ಸಾನ್ನಪ್ಪಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.