ತುಮಕೂರು : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕ್ರೂಸರ್ ವಾಹನದಲ್ಲಿದ್ದ ನಾಲ್ವರು ಅಯ್ಯಪ್ಪ ಭಕ್ತರು ಸಾವನ್ನಪ್ಪಿರು ಘಟನೆ ತುಮಕೂರಿನಲ್ಲಿ ನಡೆದಿದೆ.
ತುಮಕೂರಿನ ಕೋರಾ ಬಳಿಯ ವಸಂತನರಸಾಪುರ ಕೈಗಾರಿಕಾ ಪ್ರದೇಶದ ಬಳಿ ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿಯಾದ ಪರಿಣಾಮ ರಸ್ತೆ ಅಪಘಾತ ಸಂಭವಿಸಿದ್ದು, ಕ್ರೂಸರ್ ವಾಹನದಲ್ಲಿದ್ದ ನಾಲ್ವರು ಶಬರಿಮಲೆ ಅಯ್ಯಪ್ಪ ಭಕ್ತರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು, 7 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.








