ಮಂಡ್ಯ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮಂಡ್ಯ ತಾಲೂಕಿನ ತೂಬಿನಕೆರೆ ಗ್ರಾಮದ ಬಳಿಯ ಎಕ್ಸಿಟ್ ನಲ್ಲಿ ಈ ದುರಂತ ಸಂಭವಿಸಿದ್ದು, ಹಿಂದಿನಿಂದ ಕಾರಿಗೆ ಕೆಎಸ್ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರು ಬೆಂಗಳೂರು ಮೂಲದವರು ಎಂದು ಗುರುತಿಸಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.