ಕೋಲಾರ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಎರಡು ಖಾಸಗಿ ಬಸ್ ಗಳು ಮುಖಾಮುಖಿ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿದ್ದು, 15 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಗುಂಟಪಲ್ಲಿ ಕ್ರಾಸ್ ನಲ್ಲಿ ಆಂಧ್ರಪ್ರದೇಶದ ಎರಡು ಖಾಸಗಿ ಬಸ್ ಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಆಂಧ್ರಪ್ರದೇಶದ ಮದನಪಲ್ಲಿಯ ಗಂಗಾಧರ್ ಎಂಬುವರು ಸಾವನ್ನಪ್ಪಿದ್ದಾರೆ.
ಆಂಧ್ರಪ್ರದೇಶದ ಸುವರ್ಣಮುಖಿ ಹಾಗೂ ಎ.ಆರ್. ಟ್ರಾವೆಲ್ಸ್ ಬಸ್ ನಡುವೆ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ 15 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಮದನಪಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಾಯಲ್ಪಾಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.