ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ದೇವನಹಳ್ಳಿ ಹೊರವಲಯದ ಲಾಲಗೊಂಡನಹಳ್ಳಿ ಗೇಟ್ ಬಳಿ ನಡೆದಿದೆ.
ದೇವನಹಳ್ಳಿ ಹೊರವಲಯದ ಲಾಲಗೊಂಡನಹಳ್ಳಿ ಗೇಟ್ ಬಳಿ ಕೆಎಸ್ ಆರ್ ಟಿಸಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.








