ತುಮಕೂರು: ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ತುಮಕೂರು ತಾಲೂಕಿನ ನೆಲಹಾಲ್ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಓರ್ವ ಗಂಭೀರವಾಗಿ ಗಾಯಗೊಂಡಿದ್ದು, ಇನ್ನಿಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಮೃತರೆಲ್ಲರೂ ಬೆಂಗಳೂರು ಮೂಲದ ನಿವಾಸಿಗಳು ಎಂದು ತಿಳಿದುಬಂದಿದೆ. ಗೋಕರ್ಣ, ಮುರುಡೇಶ್ವರ, ಉಡುಪಿ ಪ್ರವಾಸಕ್ಕೆ ಹೋಗಿ ಇಂದು ಬೆಂಗಳೂರಿಗೆ ವಾಪಸ್ ಆಗುವಾಗ ಅಪಘಾತ ಸಂಭವಿಸಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.








