ಧಾರವಾಡ: : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಧಾರವಾಡ ಜಿಲ್ಲೆ ಅಣ್ಣಿಗೇರಿ ತಾಲೂಕಿನ ಭದ್ರಾಪುರ ಗ್ರಾಮದ ಬಳಿ ಗದಗ- ಹುಬ್ಬಳ್ಳಿ ನಡುವಿನ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಘಟನೆ ನಡೆದಿದೆ.
ಹುಬ್ಬಳ್ಳಿಗೆ ಹೊರಟಿದ್ದ ಕಾರು ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಲಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರ್ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತ ನಡೆದ ಸ್ಥಳಕ್ಕೆ ಅಣ್ಣಿಗೇರಿ ಠಾಣೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
![’ಆಕೆಯೇನಕ್ಕೆ ಅಲ್ಲಿಗೆ ಬಂದಿದ್ದಾರೆ?’: ವಿಜಯ್ ಪ್ರಮಾಣ ವಚನ ಸಮಾರಂಭದಲ್ಲಿ ಕಾಣಿಸಿಕೊಂಡ ನಟಿ ತ್ರಿಶಾ ವಿರುದ್ಧ ನೆಟ್ಟಿಗರ ಆಕ್ರೋಶ! ದಳಪತಿ ವಿಜಯ್ ರಾಜಕೀಯ ಪ್ರವೇಶ - [Dalapathi Vijay Politics], ತ್ರಿಶಾ ಕೃಷ್ಣನ್ ತಿಳಿ ನೀಲಿ ಸೀರೆ - [Trisha Krishnan in Blue Saree], ತಮಿಳಗ ವೆಟ್ರಿ ಕಳಗಂ ಮುಖ್ಯಮಂತ್ರಿ - [TVK Chief Minister Vijay]](https://kannadanewsnow.com/kannada/wp-content/uploads/2026/05/ವಿಜಯ್-ಪ್ರಮಾಣವಚನ-ಕಾರ್ಯಕ್ರಮದಲ್ಲಿ-ತ್ರಿಶಾ-ಕೃಷ್ಣನ್-Trisha-Krishnan-at-Vijay-Swearing-in-Ceremony-300x169.jpg)







