ರಾಮನಗರ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು, ಕ್ಯಾಂಟರ್ ಡಿಕ್ಕಿಯಾಗಿ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ತಿಟ್ಟಮಾರನಹಳ್ಲಿ ಸಮೀಪ ಕಾರು ಹಾಗೂ ಕ್ಯಾಂಟರ್ ನಡುವೆ ಡಿಕ್ಕಿಯಾದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ಶಿವಪ್ರಕಾಶ್ (37), ಪುಟ್ಟಗೌರಮ್ಮ (72) ಹಾಗೂ ಶಿವರತ್ನ (52) ಎಂದು ಗುರುತಿಸಲಾಗಿದೆ. ಮೃತರು ಚನ್ನಪಟ್ಟಣ ತಾಲೂಕಿನ ಮಂಗಾಡನಹಳ್ಳಿ ನಿವಾಸಿಗಳು. ಗಾಯಗೊಂಡ ಮೂವರನ್ನು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಥಳಕ್ಕೆ ಚನ್ನಪಟ್ಟಣ ಸಂಚಾರಿ ಪೊಲೀಸರು ಬೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಚನ್ನಪಟ್ಟಣ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.