ಚಾಮರಾಜನಗರ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೆಎಸ್ ಆರ್ ಟಿಸಿ ಬಸ್, ಟಾಟಾ ಏಸ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, 10 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಸಿದ್ದಯ್ಯನಪುರ ಗ್ರಾಮದ ಬಳಿ ಕೆಎಸ್ ಆರ್ ಟಿಸಿ ಬಸ್ ಹಾಗೂ ಟಾಟಾ ಏಸ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ಬಾಣೂರು ಗ್ರಾಮದ ಜಯಮ್ಮ (50) ಹಾಗೂ ಶ್ರುತಿ (28) ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ 10 ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರವಾಗಿ ಗಾಯಗೊಂಡವರನ್ನು ಚಾಮರಾಜನಗರದ ಸಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೊಳ್ಳೆಗಾಲದ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.