ಯಾದಗಿರಿ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಆಟೋ, ಬೈಕ್ ನಡುವೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಯಾದಗಿರಿ ತಾಲೂಕಿನ ಮುಂಡರಗಿ ಗ್ರಾಮದ ಬಳಿ ಬೈಕ್-ಆಟೋ ನಡುವೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಸವರಾಜ್ (55) ಹಾಗೂ ಬೈಕ್ ಸವಾರ ಅಂಜಪ್ಪ (45) ಮೃತಪಟ್ಟವರು.
ಯಾದಗಿರಿ ನಗರದಿಂದ ಮುಂಡರಗಿ ಕಡೆಗೆ ಆಟೋ ಹೊರಟಿತ್ತು. ಎದುರಿಗೆ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ. ಆಟೋದಲ್ಲಿದ್ದ ಇನ್ನುಳಿದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಯಾದಗಿರಿಯ ಯಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಯಾದಗಿರಿ ಸಂಚಾರಿ ಪೊಳಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.