ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರು ಸಜೀವದಹನವಾಗಿರುವ ಘಟನೆ ಚಿಕ್ಕಬಳ್ಲಾಪುರ ಜಿಲ್ಲೆಯಲ್ಲಿ ನಡೆದಿದೆ.
ಚಿಕ್ಕಬಳ್ಲಾಪುರ ಜಿಲ್ಲೆ ಚಿಂತಾಮಣಿಯ ಗೋಪಲ್ಲಿ ಗೇಟ್ ಬಳಿ ಖಾಸಗಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಇಬ್ಬರು ಸಜೀವದಹನವಾಗಿದ್ದಾರೆ.
ಬಸ್ ಹಾಗೂ ಕಾರಿನ ನಡುವೆ ಡಿಕ್ಕಿ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಕಾರಿನಲ್ಲಿದ್ದ ಇಬ್ಬರು ಸಜೀವದಹನವಾಗಿದ್ದಾರೆ. ಉಳಿದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.